ಶಿರ್ವ ಗ್ರಾಪಂ ಅಧ್ಯಕ್ಷ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ ನಿಧನ
ಶಿರ್ವ: ಶಿರ್ವ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಅಧ್ಯಕ್ಷ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಇವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು. ಆದರೆ ಇತ್ತೀಚೆಗೆ ಕಾಂಗ್ರೆಸ್ ನಿಂದ ಅಸಮಾಧಾನಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಲ್ಲದೆ, ಪಂಚಾಯಿತಿಯಲ್ಲಿ 19 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದರೂ ಅನಿರೀಕ್ಷಿತವಾಗಿ ನಡೆದ ಬೆಳವಣಿಗೆಯಿಂದ ಶಿರ್ವ ಗ್ರಾಪಂನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಗ್ರೆಗೋರಿ ಸಹಕಾರಿ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಶಿರ್ವ ಸಹಕಾರಿ ಸೊಸೈಟಿಯ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.