ಶಿವಾಜಿ ವಂಶಸ್ಥರು ಕರ್ನಾಟಕದವರು; ಉದ್ಧವ್ ಠಾಕ್ರೆ ವಿರುದ್ಧ ಗುಡುಗಿದ ಡಿಸಿಎಂ ಲಕ್ಷ್ಮಣ ಸವದಿ
ಉಡುಪಿ: ಛತ್ರಪತಿ ಶಿವಾಜಿ ಕುಟುಂಬಸ್ಥರು ಕರ್ನಾಟಕ ಮೂಲದವರು. ಶಿವಾಜಿಯ ಪೂರ್ವಜರು ಕರ್ನಾಟಕದ ಗದಗ ಜಿಲ್ಲೆಯಲ್ಲಿದ್ದರು. ಇದನ್ನು ತಿಳಿದುಕೊಳ್ಳುವ ಬದಲು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವಿವೇಕಿತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದರು. ಇಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿವೆ. ಅದರ ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತೆ ಆಗಿದೆ. […]