ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನ ಶಕ್ತಿ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ನ ಶಕ್ತಿ. ಅವರು ಓರ್ವ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿದ್ದು, ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಕಾಂಗ್ರೆಸ್ ಪಾಲಿಗೆ “ಟ್ರಬಲ್ ಶೂಟರ್” ಎಂದೇ ಖ್ಯಾತರಾದವರು. ಪಕ್ಷವು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲೆಲ್ಲಾ ತನ್ನ ಹಿತವನ್ನು ಬದಿಗಿರಿಸಿ ಪಕ್ಷವನ್ನು ಗೆಲುವಿನ ಪಥದತ್ತ ಮುನ್ನಡೆಸುವ ಧೀಮಂತ ವ್ಯಕ್ತಿತ್ವ ಇವರದ್ದು. ಅಧಿಕಾರ ಇರಲಿ ಇಲ್ಲದಿರಲಿ ಡಿ.ಕೆ. ಶಿವಕುಮಾರ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರುತ್ತಾರೆ. ತನ್ನ ಮೂರುವರೆ ದಶಕಗಳ ರಾಜಕೀಯ ಜೀವನದುದ್ದಕ್ಕೂ ಪಕ್ಷವಹಿಸಿದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದ ಶ್ರೇಯಸ್ಸು ಇವರದ್ದಾಗಿದೆ. […]