ಅಕ್ಟೋಬರ್ 19 ರಂದು ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ […]
ಶಿವಳ್ಳಿ: ಮಾಲೀಕರಿಲ್ಲದ ವೇಳೆ ಮನೆಯಿಂದ 64,000 ರೂ ಮೌಲ್ಯದ ಸೊತ್ತು ಕಳವು
ಶಿವಳ್ಳಿ: ಇಲ್ಲಿನ ಕುಂಜಿಬೆಟ್ಟುವಿನ ಎಲ್‌ಎಲ್‌ಆರ್ ಮಾರ್ಗದ ನಿವಾಸಿ ವೈಷ್ಣವಿ ಮಡಿ ತಮ್ಮ ತಂದೆ-ತಾಯಿ ಮತ್ತು ಕುಟುಂಬಸ್ಥರೊಂದಿಗೆ ನೇಪಾಳಕ್ಕೆ ಪ್ರವಾಸ ಹೋಗಿದ್ದು, ಸೆ. 09 ರಿಂದ ಸೆ 10 ರವರೆಗೆ ರಾತ್ರಿ 9 ಗಂಟೆಯಿಂದ ಮರುದಿನ 10.45 ರೊಳಗೆ ಮನೆಯ ಮುಖ್ಯದ್ವಾರದ ಬಾಗಿಲನ್ನು ಕಳ್ಳರು ಆಯುಧದಿಂದ ಮುರಿದು ಒಳಪ್ರವೇಶಿಸಿ, ಮನೆಯ ದೇವರ ಕೋಣೆಯಲ್ಲಿದ್ದ 500 ಗ್ರಾಂ ತೂಕದ ಬೆಳ್ಳಿಯ ದೇವರ ಪೀಠ, 50 ಗ್ರಾಂ ತೂಕದ ಬೆಳ್ಳಿಯ ಸಣ್ಣ ತಟ್ಟೆ, 150 ಗ್ರಾಂ ತೂಕದ ಬೆಳ್ಳಿಯ ಅರಶಿನ ಕುಂಕುಮ […]
ತೋಟಗಾರಿಕೆ ಇಲಾಖೆಯ ವತಿಯಿಂದ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳ ಮಾರಾಟ
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವನಿಕರ ಬೇಡಿಕೆಗನುಗುಣವಾಗಿ ವಿವಿಧ ತೋಟಗಾರಿಕೆ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ನಿಂಬೆ, ಕರಿಬೇವು ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ […]
ಶಿವಳ್ಳಿ: ವ್ಯಕ್ತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕರಂಬಳ್ಳಿ ಜನತಾ ಕಾಲೋನಿ ನಿವಾಸಿ ವೆಂಟೇಶ್ ನಾಗರಾಜ್ (32) ಎಂಬ ವ್ಯಕ್ತಿಯು ಜುಲೈ 19 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜೂನ್ 17 ರಿಂದ 19 ರ ವರೆಗೆ ಹಲಸು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಲಸು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವು ಜೂನ್ 17 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ನಡೆಯಲಿದೆ. ಮೇಳದಲ್ಲಿ ಹಲಸಿನ ವಿವಿಧ ತಳಿಗಳು, ಹಲಸಿನ ಆಹಾರ ಉತ್ಪನ್ನಗಳು ಹಾಗೂ ಮೌಲ್ಯ ವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಜೇನು ಪ್ರದರ್ಶನ […]