ಲಿಂಗನಮಕ್ಕಿಗೆ ಒಂದೇ ದಿನ ಮೂರುವರೆ ಅಡಿ ನೀರು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ
ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಮಾಣಿ ಜಲಾಶಯ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ ಮಳೆಯಾಗಿದೆ.ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ ತಲುಪಿದ್ದು, ಇನ್ನೊಂದು ಅಡಿಯಷ್ಟು ನೀರು ಏರಿಕೆಯಾದರೆ ಮಂಟಪ ಸಂಪೂರ್ಣ ಮುಳುಗಡೆಯಾಗಲಿದೆ. ಹೀಗಾಗಿ ಮಂಟಪದ ಬಳಿ ಸಾರ್ವಜನಿಕರು ತಂಡೋಪತಂಡವಾಗಿ ಬಂದು ನದಿಯ ವಿಹಂಗಮ […]