ನೂರಾರು ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾದ ಡಾ.ಧನಂಜಯ ಸರ್ಜಿ.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ. ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016 ರಲ್ಲಿಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್ ಅಡಿಯಲ್ಲಿ ಆ ಎಲ್ಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ನಿದರ್ಶನವಾಗಿದೆ. […]