ಭರ್ಜರಿ ತಯಾರಿ , ದಿನಪೂರ್ತಿ ಕಾರ್ಯಕ್ರಮ : ಶಿವಣ್ಣನ ಹುಟ್ಟುಹಬ್ಬ

ಕೋವಿಡ್‌ ಆತಂಕ ಆನಂತರ ನಟ ಪುನೀತ್‌ ರಾಜಕುಮಾರ್‌ ಅವರ ಅಗಲಿಕೆಯ ದುಃಖದಿಂದಾಗಿ ನಟ ಶಿವರಾಜಕುಮಾರ್‌, ಸುಮಾರು ನಾಲ್ಕು ವರ್ಷಗಳಿಂದ ಅದ್ಧೂರಿ ಬರ್ತ್‌ಡೇ, ಸಂಭ್ರಮಾಚರಣೆಗಳಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಅಭಿಮಾನಿಗಳ ಒತ್ತಾಯದ ಮೇರೆಗೆ ಸಾರ್ವಜನಿಕವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಶಿವರಾಜಕುಮಾರ್‌ ಸಮ್ಮತಿಸಿದ್ದು, ಅದಕ್ಕಾಗಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ. ದಿನಪೂರ್ತಿ ಕಾರ್ಯಕ್ರಮ: ಜು.11ರ ಸಂಜೆಯಿಂದಲೇ ಶಿವರಾಜಕುಮಾರ್‌ ಅವರ ಹುಟ್ಟುಹಬ್ಬ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ರಾತ್ರಿ 12 ಗಂಟೆಗೆ ಬೃಹತ್‌ ಕೇಕ್‌ ಕತ್ತರಿಸಲಾಗುತ್ತಿದ್ದು, […]