ಶಿವಪಾಡಿ: ಫೆ.25 ರಿಂದ ಮಾ. 5 ರವರೆಗೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಐತಿಹಾಸಿಕ ಅತಿರುದ್ರಯಾಗ
ಮಣಿಪಾಲ: ಇಲ್ಲಿನ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ಐತಿಹಾಸಿಕ ಅತಿರುದ್ರಯಾಗವನ್ನು ಫೆ.25 ರಿಂದ ಮಾ. 4 ರವರೆಗೆ ಆಯೋಜಿಸಲಾಗುವುದು. ಯಾಗದ ಕುರಿತು ನಡೆದ ಸಭೆಯ ಉದ್ಘಾಟನೆಯಲ್ಲಿ ಮಾತನಾಡಿದ ಮಣಿಪಾಲ ವಿಶ್ವ ವಿದ್ಯಾಲಯದ ಸಹಕುಲಪತಿ ಹಾಗೂ ಯಾಗ ಸಮಿತಿಯ ಗೌರವಾಧ್ಯಕ್ಷ ಡಾ. ಎಚ್.ಎಸ್. ಬಲ್ಲಾಳ್, ಕಾರ್ಯಕ್ರಮಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸಂಸ್ಥೆಯ ಪರವಾಗಿ ನೀಡಲಾಗುವುದು ಎಂದರು. ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಠದ ಉಡುಪಿ ಶಾಖೆಯ ಧರ್ಮಾಧಿಕಾರಿ ನಾಗೇಶ್ ಶಾಸ್ತ್ರಿ ಇವರು […]
ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ
ಮಣಿಪಾಲ: ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]
ಮಣಿಪಾಲ: ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮ
ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಭಜನಾ ಮಂದಿರ ಮುಂಡ್ಕಿನಜೆಡ್ಡು, ಚೇರ್ಕಾಡಿ ಇದರ ಅಧ್ಯಕ್ಷ ರಾಜೇಶ್ ಪಾಟೀಲ್ ಇವರನ್ನು ಗೌರವಿಸಲಾಯಿತು.
ನ.7 ರಂದು ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮ
ಮಣಿಪಾಲ: ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮವು ನ.6 ರವಿವಾರ ಮತ್ತು ನ.7ಸೋಮವಾರದಂದು ನಡೆಯಲಿರುವುದು. ನ.6 ರಂದು ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ದೀಪಪ್ರಜ್ವಲನೆ, ಭಜನಾ ಪ್ರಾರಂಭ ಮತ್ತು ದೀಪ ಸ್ಥಾಪನೆ ನಡೆಯಲಿದ್ದು, ನ.7 ರಂದು ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ಮತ್ತು ಭಜನಾ ಏಕಾಹದಲ್ಲಿ ಭಾಗವಹಿಸಿದ ಭಜನಾ ಮಂಡಳಿಗಳಿಗೆ ಗೌರವಾರ್ಪಣೆ ನಡೆಯಲಿರುವುದು. ಸಭಾ ಕಾರ್ಯಕ್ರಮದ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]