ಶಿವಪಾಡಿ: ಅತಿರುದ್ರಮಹಾಯಾಗದಲ್ಲಿ ತೇಜಸ್ವಿ ಸೂರ್ಯ ಹಾಗೂ ಅಣ್ಣಾಮಲೈ ಭಾಗಿ
ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ. 22 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನವಾದ ಫೆ. 27, ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಅತಿರುದ್ರ ಮಹಾಯಾಗದಂದು ಬೆಳಗ್ಗೆ ಸಚಿವ ವಿ. ಸುನೀಲ್ ಕುಮಾರ್ ಆಗಮಿಸಿದ್ದು, ಮಧ್ಯಾಹ್ನ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮತ್ತು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಶ್ರೀ […]
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಅತಿರುದ್ರಯಾಗ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟನೆ
ಶಿವಪಾಡಿ: ಇಲ್ಲಿನ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಮೊದಲನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಯಾಗದ ಪ್ರಧಾನ ಅರ್ಚಕ ವಿನಾಯಕ ಉಡುಪ ದೀಪ ಬೆಳಗಿಸಿ ಉದ್ಘಾಟಿಸಿದರು. ಕು. ಅಕ್ಷಯ ಗೋಖಲೆ ಧಾರ್ಮಿಕ ಉಪನ್ಯಾಸ ನೀಡಿದರು. ಜಂಸಾಲೆ ರಾಘವೇಂದ್ರ ಆಚಾರ್ಯ ಸಾರಥ್ಯದಲ್ಲಿ “ಯಕ್ಷಗಾನ ವೈಭವ” ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಹಿರಿಯರಾದ ಶಂಭು ಶೆಟ್ಟಿ, ಶಾಸಕ ರಘುಪತಿ ಭಟ್, ಯಾಗದ ರೂವಾರಿ ವಾಗೇಶ್ ಶಾಸ್ತ್ರಿ, ಸಹಕಾರಿ ರಂಗದ ಧುರೀಣ ಬೋಳ ಸದಾಶಿವ ಶೆಟ್ಟಿ, […]
ಫೆ.22 ರಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರಯಾಗ ಮಹಾಸಂಕಲ್ಪ
ಶಿವಪಾಡಿ: ಶ್ರಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.22 ರಂದು ಬೆಳಿಗ್ಗೆ 6.30 ಕ್ಕೆ ಅತಿರುದ್ರಯಾಗ ಮಹಾಯಾಗದ ಮಹಾಸಂಕಲ್ಪವು ನೂರ ಇಪ್ಪತ್ತೊಂದು ಋತ್ವಿಜರಿಂದ ಶ್ರೀ ರುದ್ರ ಪುರಶ್ಚರಣ ಪ್ರಾರಂಭವಾಗಲಿದೆ. ಶ್ರೀದೇವರಿಗೆ ನವಕ ಪ್ರಧಾನ ಹೋಮ ಪುರಸ್ಸರ ನವಕಲಶಾಭಿಷೇಕ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 12 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಕ್ತಿ ಮಾಧುರ್ಯ ಕಾರ್ಯಕ್ರಮ, ಸಾಯಂಕಾಲ 5.30 ರಿಂದ ಧಾರ್ಮಿಕ ಉಪನ್ಯಾಸ ಕುಮಾರಿ ಅಕ್ಷಯ ಗೋಖಲೆ ಇವರಿಂದ. ಸಂಜೆ 6.30 ರಿಂದ ಯಕ್ಷಗಾನ ವೈಭವ- ರಾಘವೇಂದ್ರ ಆಚಾರ್ಯ ಸಾರಥ್ಯದಲ್ಲಿ […]
ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರಯಾಗದ ಪೂರ್ವ ತಯಾರಿ ಪ್ರಾರಂಭ
ಉಡುಪಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22 ರಿಂದ ಪ್ರಾರಂಭ ಗೊಳ್ಳಲಿರುವ ಅತಿರುದ್ರ ಮಹಾಯಾಗದ ಹೋಮ ಕುಂಡಗಳು, ಸಭಾಂಗಣ, ಭೋಜನ ಶಾಲೆ, ಉಗ್ರಾಣ, ಪಾಕಶಾಲೆ ಇತ್ಯಾದಿ ವ್ಯವಸ್ತೆ ಗಳಿಗೋಸ್ಕರ ಜಾಗ ಸಮತಟ್ಟುಗೊಳಿಸುವ ಕಾರ್ಯವು ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸುಭಾಕರ ಸಾಮಂತ್ ಮತ್ತು ದಿನೇಶ್ ಪ್ರಭು, ಶಾಶ್ವತ ಟ್ರಸ್ಟಿ ದಿನೇಶ್ ಸಾಮಂತ್, ಇತರ ಟ್ರಸ್ಟಿ ಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.
ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ […]