ಸಂಭಾವನೆ ಪಡೆಯದೆ ‘ನಂದಿನಿ’ ರಾಯಭಾರಿಯಾಗಿ ಶಿವಣ್ಣ.. 

ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಕರ್ನಾಟಕ ಹಾಲು ಮಹಾಮಂಡಳಿಯ ನಂದಿನಿ ಬ್ರ್ಯಾಂಡ್ಗೆ ಇನ್ಮುಂದೆ ಡಾ. ಶಿವರಾಜ್ಕುಮಾರ್ ರಾಯಭಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಲು ಹ್ಯಾಟ್ರಿಕ್‌ ಹೀರೋ ಶಿವರಾಜ್ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ನಂದಿನಿ ಉತ್ಪನ್ನಗಳ ಬ್ರ್ಯಾಂಡ್‌ ಅಂಬಾಸಿಡರ್ ಆಗಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಶಿವರಾಜ್ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆ, ಕೆಎಂಎಫ್‌ ಅಧ್ಯಕ್ಷ ಎಸ್ ಭೀಮಾನಾಯ್ಕ ಅವರು ಡಾ.ಶಿವರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಹ್ಯಾಟ್ರಿಕ್‌ ಹೀರೋ ಶಿವ ರಾಜ್ಕುಮಾರ್‌ […]