ಕುಂದಾಪುರ ಶಾಸ್ತ್ರೀ ಸರ್ಕಲ್ ಕಂಪ್ಲೀಟ್ ಆದ್ಮೇಲೆ ಉದ್ಘಾಟನೆ: ಶೋಭಾ ಕರಂದ್ಲಾಜೆ
ಕುಂದಾಪುರ: ಹಲವು ಪ್ರತಿಭಟನೆಗಳ ಬಳಿಕ ಕಳೆದ ಕೆಲ ದಿನಗಳಿಂದ ವೇಗವಾಗಿ ಸಾಗುತ್ತಿರುವ ಇಲ್ಲಿನ ಶಾಸ್ತ್ರೀ ಸರ್ಕಲ್ ಫ್ಲೈಓವರ್ ಕಾಮಗಾರಿಯನ್ನು ಶುಕ್ರವಾರ ಬೆಳಿಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಶಾಸ್ರ್ತೀ ಸರ್ಕಲ್ ಫ್ಲೈಓವರ್ ಉದ್ಘಾಟನೆ ಯಾವಾಗ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದೆ ಶೋಭಾ ಕರಂದ್ಲಾಜೆ, ಕಾಮಗಾರಿ ಪೂರ್ಣಗೊಂಡ ಬಳಿಕ ಉದ್ಘಾಟನೆ ಮಾಡಲಾಗುವುದು ಎಂದು ಜಾಣ್ಮೆಯ ಉತ್ತರ ನೀಡಿದರು. ಏಪ್ರಿಲ್ ಮೊದಲಿಗೆ ಪೂರ್ಣ: ಬಳಿಕ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಕಂಪೆನಿ […]
ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ವಿವರ
ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಇಂದು, ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿದ್ದು, ಮಾರ್ಚ್ 27 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮಾರ್ಚ್ 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಮಹಿಳೆಯರ ನಿರ್ಣಯಕ್ಕೆ ಮನ್ನಣೆ ಸಿಗಬೇಕು: ಶೋಭಾ ಕರಂದ್ಲಾಜೆ
ಉಡುಪಿ: ರಾಜಕೀಯ ಕ್ಷೇತ್ರ, ದೇಗುಲದ ಆಡಳಿತ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಮಹಿಳೆಯರ ಮಾತು, ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ಮಹಿಳೆಯರು ಸಮಾಜದಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸರ್ಕಾರ ಸಹಿತ ಮಹಿಳೆಯರು ಇರುವ ಸಂಘಟನೆಗಳು ಮಹಿಳೆಯರ ಭಾವನೆ, ಮಾತು ಹಾಗೂ ನಿರ್ಣಯಕ್ಕೆ ಗೌರವ ಕೊಡುವ ಕೆಲಸ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀಶಕ್ತಿ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ […]
ಅಭಿನಂದನ್ ಭಾರತಕ್ಕೆ ವಾಪಾಸ್ ಬಂದಿರುವುದು ಭಾರತಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು: ಶೋಭಾ ಕರಂದ್ಲಾಜೆ
ಉಡುಪಿ: ಅಭಿನಂದನ್ ವರ್ಧಮಾನ್ ಭಾರತಕ್ಕೆ ವಾಪಾಸ್ ಬಂದಿರುವುದು ಭಾರತಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು. ನಮ್ಮ ಪ್ರಧಾನಿ ಮೋದಿ ಸಿಂಹದ ಮರಿ ಆಗಿರುವುದಕ್ಕೆ ಇದೆಲ್ಲ ಸಾಧ್ಯವಾಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನಾರ್ಹರು. ಸಾಹಸದ ಕೆಲಸ ಮಾಡಿ ಭಾರತಕ್ಕೆ ಬರುತ್ತಿದ್ದಾರೆ. ಜಿನೀವಾ ಒಪ್ಪಂದದ ಪ್ರಕಾರ ಸೈನಿಕರಿಗೆ ಹಾನಿ ಮಾಡಬಾರದು. ಆದರೆ ಪಾಕ್ ಹಲ್ಲೆ ನಡೆಸಿ ವಿಡಿಯೋ ಬಿಡುಗಡೆ ಮಾಡಿತು. ಭಾರತ ಒತ್ತಡ ತಂದ ಪರಿಣಾಮ ಅವರ ಬಿಡುಗಡೆ […]