ಶೋಭಾ ವೈಫಲ್ಯತೆ ಸದ್ಬಳಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಅಮೃತ್ ಶೆಣೈ

ಉಡುಪಿ: ಕಾಂಗ್ರೆಸ್‌ ಹೈಕಮಾಂಡ್‌ ಸಂಸದೆ ಶೋಭಾ ಕರಂದ್ಲಾಜೆಯ ನಿಷ್ಕ್ರಿಯತೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯತೆಯನ್ನು ಸದ್ಬಳಕೆ ಮಾಡಿಕೊಂಡು ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಬದಲು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್‌ ಶೆಣೈ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ ಹೈಕಮಾಂಡ್‌  ನಿರ್ಧಾರ ಸಂಸದೆ […]

ನಟಿ ಸುಮಲತಾ ವಿರುದ್ಧ ಕೀಳುಮಟ್ಟದ ಭಾಷೆ ಪ್ರಯೋಗ ವಿಚಾರ, ರೇವಣ್ಣ ಕೂಡಲೇ ಕ್ಷಮೆ ಕೋರಬೇಕು: ಶೋಭಾ 

ಉಡುಪಿ: ನಟಿ ಸುಮಲತಾ ಅಂಬರೀಶ್ ಅವರ ಬಗ್ಗೆ ಸಚಿವ ರೇವಣ್ಣ ಹಗುರ ಮಾತನಾಡಿರುವುದು ಅಕ್ಷಮ್ಯ. ಕೀಳುಮಟ್ಟ ಭಾಷೆ ಬಳಸಿ ಮಹಿಳಾ ದಿನಾಚರಣೆಯಂದೇ ಓರ್ವ ಮಹಿಳೆಗೆ ಅವಮಾನ ಮಾಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಇಂದು‌ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಂಡ ಸತ್ತವರು ರಾಜಕೀಯಕ್ಕೆ ಬರಬಾರದೆಂದು ಕಾನೂನಿಲ್ಲ. ಗಂಡನನ್ನು ಕಳೆದುಕೊಂಡು ನೋವಿನಲ್ಲಿರುವವರಿಗೆ ಮತ್ತೆ ನೋವು ಕೊಡಬಾರದು. ರೇವಣ್ಣ ಓರ್ವ ಜವಾಬ್ದಾರಿಯುತ ರಾಜಕಾರಣಿಯಾಗಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರು ಕೂಡಲೇ ಸುಮಲತಾ ಅವರ ಕ್ಷಮೆ ಕೋರಬೇಕು ಎಂದರು. ಸದ್ಯ ಸುಮಲತಾ ಕಾಂಗ್ರೆಸ್ […]