ಕೇಂದ್ರ ಕೃಷಿ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ
ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಉಡುಪಿ ಬಿಜೆಪಿ ಕಚೇರಿಯ ಎದುರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ಮಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ […]