25 ನೇ ರಜತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ

ಉಡುಪಿ: ಜಿಲ್ಲೆಯ 25 ನೇ ರಜತ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಮೆರವಣಿಗೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, […]

ಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇ.ಎಸ್.ಐ ಆಸ್ಪತ್ರೆ ಮಂಜೂರು: ಬಹುಕಾಲದ ಬೇಡಿಕೆ ನನಸಾಗಿದೆ ಎಂದ ಕುಯಿಲಾಡಿ

ಉಡುಪಿ: ಕೇಂದ್ರ ಸರಕಾರದಿಂದ ಉಡುಪಿ ಜಿಲ್ಲೆಗೆ 100 ಬೆಡ್ ಗಳ ಇ.ಎಸ್.ಐ ಆಸ್ಪತೆ ಮಂಜೂರಾಗಿದ್ದು, ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ನನಸಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತಪಡಿದ್ದಾರೆ. ಜನತೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಯಾದ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ […]

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಭೇಟಿ

ಉಡುಪಿ: ಕಾಪು ತಾಲೂಕಿನ ಮುಳೂರಿನ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲಾಧಿಕಾರಿ ಕೂರ್ಮಾ ರಾವ್ ಜೊತೆಗಿದ್ದರು. ಕುಂದಾಪುರ ಎಸಿ ರಾಜು ಮತ್ತಿತರರು ಉಪಸ್ಥಿತರಿದ್ದರು.   ಕೃಪೆ: ಟ್ವಿಟರ್

2024 ರೊಳಗೆ 67956 ಕಿ.ಮೀ. ಉದ್ದದ ರೈಲು ಮಾರ್ಗ ವಿದ್ಯುತ್ತೀಕರಣ ಯೋಜನೆ: ಶೋಭಾ ಕರಂದ್ಲಾಜೆ

ಉಡುಪಿ: ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ […]

ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಸೌಲಭ್ಯ ಒದಗಿಸುತ್ತಿದೆ ಕೇಂದ್ರ: ಶೋಭಾ ಕರಂದ್ಲಾಜೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂಧ್ಲಾಜೆ ಹೇಳಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಜನಪ್ರಿಯ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. […]