6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಉಮೇಶ್ ಕತ್ತಿ

ಉಡುಪಿ: ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ವಿವಿಧ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರ್ಕಾರವು ಪ್ರಸ್ತುತ ಬಗೆಹರಿಸಿದ್ದು, 6.60 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರತುಪಡಿಸಿ, ಸರ್ಕಾರಿ ಆದೇಶ ಹೊರಡಿಸಿದೆ ಎಂದು ರಾಜ್ಯದ ಅರಣ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬ್ರಹ್ಮಾವರದ ನೀಲಾವರದಲ್ಲಿ ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ […]

ಕರಾವಳಿ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ದೀಪಗಳು ಬೆಳಗಲು ಪ್ರಾರಂಭ

ಉಡುಪಿ: ಕರಾವಳಿ ಬೈಪಾಸ್ ರಾಷ್ಟ್ರೀಯ ಹೆದ್ದಾರಿಯ ಬೀದಿ ದೀಪಗಳು ಕೊನೆಗೂ ಬೆಳಗಲು ಪ್ರಾರಂಭವಾಗಿದೆ. ಹಲವಾರು ಮನವಿ ಮತ್ತು ಮಾಧ್ಯಮ ವರದಿಗಳ ಬಳಿಕ ರಾಷ್ಟ್ರೀಯ ಹೆದ್ದಾರಿಯ ಬೀದಿ ದೀಪಗಳು ಬೆಳಗಲು ಪ್ರಾರಂಭಿಸಿರುವುದು ನಾಗರಿಕರಲ್ಲಿ ಹರ್ಷವನ್ನುಂಟು ಮಾಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಗುರುವಾರ ರಾತ್ರಿಯಂದು ದೀಪಗಳ ಸಂಪರ್ಕವನ್ನು ಸ್ಥಾಪಿಸಿದೆ. ಹೆದ್ದಾರಿ ದೀಪಗಳಿಗೆ ಸಂಪರ್ಕವನ್ನು ನೀಡಿ ವ್ಯವಸ್ಥೆ ಕಲ್ಪಿಸುವಂತೆ ಉಡುಪಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ಹೆದ್ದಾರಿ ಪ್ರಾಧಿಕಾರವು […]

ಮೇ 7 ರಂದು ದಿಶಾ ಸಭೆ

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಮೇ 7 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ಶಾಖೆಯ ಉದ್ಘಾಟನೆ, ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ

ಮಣಿಪಾಲ: ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ನೂತನ ಶಾಖೆಯು ಇದೇ ಬರುವ ಮೇ 2ರಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಇದು ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆಯಾಗಿದ್ದು, ಆರ್‌ಟಿಜಿಎಸ್, ನೆಫ್ಟ್, ಎಟಿಎಂ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯವನ್ನು ಒಳಗೊಂಡಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 2ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ […]

ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಮಾರಕ ಕಾಯಿಲೆಗಳು : ಶೋಭಾ ಕರಂದ್ಲಾಜೆ

  ಉಡುಪಿ: ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್ ಟೌನ್, ರಾಷ್ಟ್ರೀಯ ಆರೋಗ್ಯ […]