ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲಾತ್ಕಾರ, ಖಂಡನೀಯ: ಶೋಭಾ ಕರಂದ್ಲಾಜೆ

ಉಡುಪಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸೂಚಿಸಿರುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ […]