ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ: ಯಶ್ ಪಾಲ್ ಸುವರ್ಣ ಅಭಿನಂದನೆ

ಉಡುಪಿ: ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ […]

ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರದ ಅನುಮೋದನೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಡಿತರ ಮೂಲಕ ವಿತರಿಸಲು ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬೇಡಿಕೆಯಂತೆ ಕರ್ನಾಟಕ […]

ಕರಾವಳಿಗರಿಗೆ ಕುಚ್ಚಲಕ್ಕಿ ಭಾಗ್ಯ: ಪಡಿತರ ವಿತರಣೆಗೆ ಕೇಂದ್ರ ಅಸ್ತು

ಮಂಗಳೂರು/ ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುವ ಮತ್ತು ಇಲ್ಲಿನ ಜನತೆ ಬಹುವಾಗಿ ಇಷ್ಟಪಟ್ಟು ಸೇವಿಸುವ ಕುಚ್ಚಲಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸುವ ಸಾರ್ವಜನಿಕರ ಬೇಡಿಕೆಯ ಬಗ್ಗೆ ಕೇಂದ್ರ ಆಹಾರ ಮತ್ತು […]

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ‌ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ‌ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ […]

ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ: ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಉಡುಪಿ: ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದಾಗಿ ಬಿತ್ತನೆ ಮಾಡಿದ ಭತ್ತದ ಬೆಳೆಯು ಹಾನಿಯಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ರೈತರು ಮತ್ತೊಮ್ಮೆ ಕೃಷಿ ಮಾಡಲು ಅಗತ್ಯವಿರುವ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ […]