ಮೋದಿಯಿಂದ ದೇಶ ಉದ್ದಾರವಾಗಿದೆ:ಶೋಭಾಕರಂದ್ಲಾಜೆ
ಉಡುಪಿ: ಮೋದಿ ಅವರಿಂದ ದೇಶ ಉದ್ದಾರವಾಗಿದೆ. ದೇಶದ ರಕ್ಷಣೆಗೆ ಒತ್ತುನೀಡಿದ್ದು, ಭಯೋತ್ಪಾದಕರನ್ನು ಮಟ್ಟಹಾಕಲಾಗುತ್ತಿದೆ. ಹಾಗಾಗಿ, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಬಿಜೆಪಿಗೆ ಮತಹಾಕಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಕೊಂಡಕೂರು ವಾರ್ಡ್‌ನಲ್ಲಿ ಕಾರ್ಯಕರ್ತರ ಸಭೆ ಹಾಗೂ ಚಾಯ್‌ಪೇ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಡುಪಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ ನಿಧಾನಗತಿಯಲ್ಲಿ ಕಾಮಗಾರಿ ನಡೆಸುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ಎಂದರು. […]