ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಂಬಂದಿಸಿದಂತೆ ಮಾತನಾಡಿದ, ಸಂಸದರು ಜಿಲ್ಲೆಯಲ್ಲಿ  ಭಾಗಶ: ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನ: ಪರಿಶೀಲಿಸಿ, […]