ಬೈಕ್ ಸವಾರರಿಗೆ ಶಾಕಿಂಗ್ ಸುದ್ದಿ: ಹೆಲ್ಮೆಟ್ ಧರಿಸದಿದ್ದರೆ ದಂಡದ ಜತೆ 3 ತಿಂಗಳು ಲೈಸನ್ಸ್ ಅಮಾನತು
ಬೆಂಗಳೂರು: ಸಾರಿಗೆ ಇಲಾಖೆ ಹೊಸ ನಿಯಮ ಜಾರಿಗೊಳಿಸಿದ್ದು, ಅದರಂತೆ ಇನ್ಮುಂದೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ ದಂಡದ ಜತೆಗೆ 3 ತಿಂಗಳು ಲೈಸನ್ಸ್ ಅಮಾನತುಗೊಳ್ಳಲಿದೆ. ಹಿಂಬದಿ ಸವಾರರಿಗೂ ಹೆಲ್ಮೇಟ್ ಕಡ್ಡಾಯಗೊಳಿಸಿದ್ದು, ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯ ಹೆಲ್ಮೇಟ್ ಧರಿಸಬೇಕು. ದ್ವಿಚಕ್ರ ವಾಹನ ಚಾಲಕರು ಹೆಚ್ಚು ಅಪಘಾತಕ್ಕೀಡಾಗುತ್ತಿರೋ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಠಿಣ ನಿಮಯ ಜಾರಿಗೊಳಿಸಿದೆ. ಹೆಲ್ಮೆಟ್ ಧರಿಸದೇ ಸಂಚರಿಸುವ ಸವಾರರ ವಿರುದ್ಧ ವಾಹನಗಳ ಕಾಯ್ದೆ 1988 ಕಲಂ 194-ಟಿ ಅನ್ವಯ ದಂಡ ವಸೂಲಾತಿಯೊಂದಿಗೆ ವಾಹನ ಸವಾರರ ಚಾಲನಾ […]