ಗ್ರಾಹಕರಿಗೆ ಶಾಕಿಂಗ್ ಸುದ್ದಿ: ಅಡುಗೆ ಅನಿಲ‌ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಉಂಟಾಗಿದೆ. ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿ ಮತ್ತೆ ₹25.50 ಹೆಚ್ಚಳವಾಗಿದೆ. ಪರಿಷ್ಕೃತ ದರದಂತೆ ದೆಹಲಿಯಲ್ಲಿ ಒಂದು ಅಡುಗೆ ಅನಿಲ ಸಿಲಿಂಡರ್ ಬೆಲೆ ₹809 ರಿಂದ ₹834.50 ಗೆ ಏರಿಕೆಯಾಗಿದೆ. ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಅದರಂತೆ ಈ ತಿಂಗಳಲ್ಲಿ ದರ ಹೆಚ್ಚಳ ಮಾಡಿವೆ. ಮೇ 1ರಂದು ಗ್ಯಾಸ್ […]