ಶಾರ್ದೂಲ್ ಠಾಕೂರ್ ಗಿಲ್ಲ ಪಂದ್ಯಶ್ರೇಷ್ಠ ಪ್ರಶಸ್ತಿ: ಕೊಹ್ಲಿ ಅಚ್ಚರಿ

ಪುಣೆ: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಏಕೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿಲ್ಲ ಎಂಬುದು ಆಶ್ಚರ್ಯಕರವಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ಸಿಗದಿರುವುದರ ಬಗ್ಗೆಯೂ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಂದ್ಯದ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿರಾಟ್ ಕೊಹ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ‘ಶಾರ್ದೂಲ್‌ಗೆ ಪಂದ್ಯಶ್ರೇಷ್ಠ ಮತ್ತು ಭುವಿಗೆ ಸರಣಿಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾಗದಿರುವುದು ನನ್ನಲ್ಲಿ ಅಚ್ಚರಿಯನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. 330 ರನ್‌ಗಳ […]