ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ಕೊಡಿಮರ (ಧ್ವಜಸ್ತಂಭ)ದ ಶೋಭಯಾತ್ರೆ
ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ಧ್ವಜಸ್ತಂಭದ ಶೋಭಾಯಾತ್ರೆಗೆ ಉಡುಪಿ ಜೋಡುಕಟ್ಟೆಯಲ್ಲಿ ಇಂದು ಚಾಲನೆ ನೀಡಲಾಯಿತು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶೋಭಾಯಾತ್ರೆಯು ಉಡುಪಿ ಜೋಡುಕಟ್ಟೆಯಿಂದ – ಕವಿ ಮುದ್ದಣ್ಣ ಮಾರ್ಗ – ಶಿರಿಬೀಡು, ಕಲ್ಸಂಕ ಮಾರ್ಗವಾಗಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು. ಶಾಸಕ ಕೆ. ರಘುಪತಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, […]