ಶ್ರೀಚಕ್ರ ಪೀಠ ಸುರಪೋಜಿತ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ವೈಭವದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಸಂಪನ್ನ
ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಶ್ರಾವಣ ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಪೂಜೆಯ ಅಂಗವಾಗಿ ಶ್ರೀ ದುರ್ಗಾ ಆದಿಶಕ್ತಿ ದೇವಿ ಹಾಗೂ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನವನ್ನು ಕನ್ಯಾಕುಮಾರಿಯಿಂದ ವಿಶೇಷವಾಗಿ ತರಿಸಲಾಗಿದ್ದ ತಾವರೆಯ ಹೂವಿನಿಂದ ಮನಮೋಹಕವಾಗಿ ಅಲಂಕರಿಸಲಾಗಿತ್ತು. […]