ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶ ಕೊಡವೂರು ನೇಮಕ
ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿ ನಗರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷರಾಗಿ ಮೂಡಬೆಟ್ಟು ವಾರ್ಡಿನ ಸದಸ್ಯ ಶ್ರೀಶ ಕೊಡವೂರು ಅವರನ್ನು ಆಯ್ಕೆ ಮಾಡಲಾಗಿದೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಭೆಯಲ್ಲಿ ಸ್ಥಾಯಿ ಸಮಿತಿಯ ಸದಸ್ಯರಾದ ಸಂಪಾವತಿ, ಸಂತೋಷ್ ಜತ್ತನ್, ಡಿ. ಬಾಲಕೃಷ್ಣ ಶೆಟ್ಟಿ, ಯೋಗೀಶ್ ವಿ ಸಾಲ್ಯಾನ್, ಮಾನಸ ಸಿ ಪೈ, ಭಾರತಿ ಪ್ರಶಾಂತ್, ಜಯಂತಿ […]