ದೊಡ್ಡಣ್ಣಗುಡ್ಡೆ: ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ
ದೊಡ್ಡಣ್ಣಗುಡ್ಡೆ: ಇಲ್ಲಿನ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ರಮಾನಂದ ಗುರೂಜಿ ಮಾ. 23 ಶನಿವಾರದಿಂದ 24ರ ಭಾನುವಾರ ತನಕ ಹಾಗೂ 27ರ ಬುಧವಾರ ಮುಂಬೈನ ಲೋವರ್ ಪರೇಲಿನಲ್ಲಿರುವ ಸೈಂಟ್ ರಿಜಿಸ್(St. Regis) ಪಂಚತಾರಾ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾ.26ರಂದು ಇಂದೋರಿಗೆ ಭೇಟಿ ನೀಡಲಿದ್ದು, ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟಕೊಳಗಾದವರ ಸಂಕಷ್ಟ ನಿವಾರಿಸಿ ಭಕ್ತ ಜನರ […]
ದೊಡ್ಡಣ್ಣ ಗುಡ್ಡೆ: ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ದೊಡ್ಡಣ್ಣ ಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಆವರಣದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅಧ್ಯಕ್ಷತೆಯಲ್ಲಿ ಕಾರ್ಯಾರಂಭಗೊಂಡಿರುವ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲ್ಪಟ್ಟಿತು. ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಅನಿಶ್ ಆಚಾರ್ಯ ಅವರು ದೀಪ ಪ್ರಜ್ವಲಿಸಿ ಹಾಗೂ ಶಿಕ್ಷಕಿಯರು ಯೋಗ ಗೀತೆಯ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಉಪನ್ಯಾಸಕಿ ಶ್ರೀಮತಿ ಚಂದ್ರಕಲಾ ಕೊರಂಗ್ರಪಾಡಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಯೋಗದ ಬಗ್ಗೆ ಮಕ್ಕಳಿಗೆ […]
ನ.23 ರಂದು ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿ ಶಕ್ತಿ ಕ್ಷೇತ್ರದಲ್ಲಿ ಏಕಕಾಲದಲ್ಲಿ ಪಂಚದಶ ದುರ್ಗಾನಮಸ್ಕಾರ ಪೂಜೆ
ಉಡುಪಿ: ದೊಡ್ಡಣ್ಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನ.23 ರಂದು ಸಂಜೆ ಪಂಚದಶ ದುರ್ಗಾ ನಮಸ್ಕಾರ ಪೂಜೆ ಮತ್ತು ರಂಗಪೂಜೆ ದೀಪೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ.ಮೂ. ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದ್ದು, ರಾತಿ ಅನ್ನಸಂತರ್ಪಣೆ ನಡೆಯಲಿದೆ. 15 ಎಂದರೆ (1+5=6) ಇದು ಲಕ್ಷ್ಮಿಯ ಸಂಕೇತ. ಲೋಕ ಕಲ್ಯಾಣ ಮತ್ತು ಭಕ್ತರಿಗಾಗಿ ಆಯೋಜಿಸಿರುವ ಈ ಪೂಜೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರು, ಉದ್ಯೋಗಾಂಕ್ಷಿಗಳು ಪಾಲ್ಗೊಂಡು ದೇವಿಯ ಅನುಗ್ರಹ ಪಡೆಯಬಹುದು. ಕಾರ್ತಿಕ ಮಾಸದಲ್ಲಿ ಒಂದು […]