ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಆಶಾ ಕಾರ್ಯಕರ್ತೆಯರಿಗೆ ನಿಧಿ ಸಮರ್ಪಿಸಿ ಗೌರವಾರ್ಪಣೆ
ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಇದರ ವತಿಯಿಂದ ಹೆರ್ಗ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಧನಸಹಾಯ ನೀಡಿ ಗೌರವಾರ್ಪಣೆ ಸಲ್ಲಿಸುವ ಸಮಾರಂಭ ಪರ್ಕಳ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಕೋವಿಡ್ 19 ವಾರಿಯರ್ಸ್ ಗಳಾಗಿ ಜೀವದ ಹಂಗು ತೊರೆದು ಜನ ಸೇವೆ ಮಾಡಿದ 11 ಮಂದಿ ಆಶಾಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿಯ ಅಧ್ಯಕ್ಷ ಅಶೋಕ ಕಾಮತ್ ಕೆ. ಅವರು, ಆಶಾ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು. […]