ಪುಟಾಣಿ ಮಕ್ಕಳೊಂದಿಗೆ ನಿಸರ್ಗದ ಮಡಿಲಲ್ಲಿ ವಿಶ್ವ ಪರಿಸರ ದಿನಾಚರಣೆ
ಉಡುಪಿ: ನಿಸರ್ಗದ ಮಡಿಲಲ್ಲಿ ಸಸಿಗಳನ್ನು ನೆಟ್ಟ ಪುಟಾಣಿಗಳು. ಬಳಿಕ ಹಚ್ಚ ಹಸುರಿನ ಹೊದಿಕೆಯಲ್ಲಿ ಕುಳಿತು ಹಕ್ಕಿಗಳ ಕಲರವದ ನಡುವೆ ಹಿರಿಯ ಪರಿಸರತಜ್ಞರ ಮಾತು. ಉಡುಪಿ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಭಾನುವಾರ ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್, ಚೈಲ್ಡ್ ಲೈನ್ 1098 ಉಡುಪಿ, ಇಂಟರಾಕ್ಟ್ ಕ್ಲಬ್ ಮತ್ತು ಶ್ರೀ ಕೃಷ್ಣ ಬಾಲನಿಕೇತನ ಜಂಟಿ ಆಶ್ರಯದಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಪರಿಸರತಜ್ಞ ಮತ್ತು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎನ್.ಎ. […]