ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟಿ ಭಾವನಾ
ಉಡುಪಿ: ನಟಿ ಹಾಗೂ ಭರತನಾಟ್ಯ ಕಲಾವಿದೆ ಭಾವನಾ ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಪಡೆದು ಪುತ್ತಿಗೆ ಶ್ರೀಗಳಿಂದ ಕೋಟಿ ಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಸಂಗೀತ ವಿದ್ವಾನ್ ನಾರಾಯಣ ಶರಳಾಯ ಉಪಸ್ಥಿತರಿದ್ದರು.
ನಟ ಪ್ರಮೋದ್ ಶೆಟ್ಟಿ ಕುಟುಂಬದವರಿಂದ ಶ್ರೀಕೃಷ್ಣ ಮಠ ಭೇಟಿ
ಉಡುಪಿ: ಕನ್ನಡ ಚಲನಚಿತ್ರ ನಟ ಪ್ರಮೋದ್ ಶೆಟ್ಟಿಯವರು ಕುಟುಂಬ ಸಮೇತರಾಗಿ ಶ್ರೀಕೃಷ್ಣಮಠಕ್ಕಾಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಾರಾಯಣ ಶರಳಾಯ ಉಪಸ್ಥಿತರಿದ್ದರು.
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ
ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ಮತ್ತು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿಯವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರದಾದ ವರದರಾಜ ಭಟ್,ವಾದಿರಾಜ ಪೆಜತ್ತಾಯ,ವ್ರಜನಾಥ ಆಚಾರ್ಯ,ಲಾತವ್ಯ ಆಚಾರ್ಯ ,ಅಶ್ವಿನ್ ಮೊದಲಾದವರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮಂಗಳವಾರದಂದು ಅವರು ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳ ಕರ್ವಾಲಿನ ಯರ್ಲಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೂ ಭೇತಿ ನೀಡಿ ಪೂಜೆ ಸಲ್ಲಿಸಿದ್ದರು.
ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ
ಉಡುಪಿ: ಶ್ರೀಕೃಷ್ಣಮಠಕ್ಕೆ ಬಿ.ಜೆ.ಪಿ ರಾಷ್ಟೀಯ ಯುವ ಮೋರ್ಚಾ ಅಧ್ಯಕ್ಷ ,ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಠದ ಅಧಿಕಾರಿಗಳಾದ ವಾದಿರಾಜ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಪೊಡವಿಗೊಡೆಯನಿಗೆ ಗಜಲಕ್ಷ್ಮೀ ಅಲಂಕಾರ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇಂದು ಶ್ರೀ ಕೃಷ್ಣನಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಯಿತು.