ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಬೆಳ್ತಂಗಡಿ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.  

ನ.19-23ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ: ಭಗವಾನ್ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು ನ. 19-23ರವರೆಗೆ ಜರುಗಲಿದ್ದು, ನಾಡಿನ ಗಣ್ಯರು, ವಿದ್ವಾಂಸರು ಮತ್ತು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ.22 ರಂದು ಜರುಗಲಿರುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯದ ಸಚಿವೆ ಸ್ಮೃತಿ ಇರಾನಿ ಇವರು ಉದ್ಘಾಟಿಸಲಿದ್ದಾರೆ. ಬಹುಶ್ರುತ ವಿದ್ವಾಂಸರಾದ ಎಂ.ಆರ್ ಸತ್ಯನಾರಾಯಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರುಗಳಾದ ಫಾ.ಮಾರ್ಸೆಲ್ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ಇ […]