ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪ: ಪ್ರಮೋದ್ ಮುತಾಲಿಕ್ ವಿರುದ್ದದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕ-ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ 2017 ರಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 196 ರ ಅಡಿಯಲ್ಲಿ ಅಗತ್ಯವಿರುವ ರಾಜ್ಯ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ದೂರಿನಲ್ಲಿ ಅಪರಾಧದ ಅರಿವನ್ನು ಪಡೆದಿದ್ದಾರೆ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಗಮನಿಸಿದ್ದಾರೆ. […]

ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಅಧಿಕೃತ ಘೋಷಣೆ

ಶ್ರೀರಾಮ ಸೇನೆ ಸಂಘಟನೆಯ ಮುಖಂಡ, ಪ್ರಖರ ಹಿಂದುತ್ವವಾದಿ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರದಿಂದ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾವು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ, ಯರು ಏನೇ ಒತ್ತಡ ಹಾಕಿದರೂ ಕಾರ್ಕಳದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೀವಿನ ಧ್ವನಿಯಾಗಿ, ಅವರೆಲ್ಲರ ಒತ್ತಡದಿಂದ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಹಾಗೂ ಮೋದಿ ವಿರೋಧಿಯಲ್ಲ. ತಾನು ಕೆಲವು ವ್ಯಕ್ತಿಗಳ ವಿರುದ್ದ, […]