ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಶ್ರೀ ಶಾರದಾ ಕಾಲೇಜು ನಡುವೆ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು, ಬಸ್ರೂರಿನ ಶ್ರೀ ಶಾರದಾ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಫೈನಾನ್ಶಿಯಲ್ ಮತ್ತು ಇನ್ಶುರೆನ್ಸ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಬ್ಯುಸಿನೆಸ್ ಕರೆಸ್ಪಾಂಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಉನ್ನತಿ ಸಂಸ್ಥೆಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿರುವ ಶ್ರೀ ಶಾರದಾ ಕಾಲೇಜಿನ ಬಿ.ಕಾಂ […]