ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರಯಾಗದ ಪೂರ್ವ ತಯಾರಿ ಪ್ರಾರಂಭ
ಉಡುಪಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22 ರಿಂದ ಪ್ರಾರಂಭ ಗೊಳ್ಳಲಿರುವ ಅತಿರುದ್ರ ಮಹಾಯಾಗದ ಹೋಮ ಕುಂಡಗಳು, ಸಭಾಂಗಣ, ಭೋಜನ ಶಾಲೆ, ಉಗ್ರಾಣ, ಪಾಕಶಾಲೆ ಇತ್ಯಾದಿ ವ್ಯವಸ್ತೆ ಗಳಿಗೋಸ್ಕರ ಜಾಗ ಸಮತಟ್ಟುಗೊಳಿಸುವ ಕಾರ್ಯವು ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸುಭಾಕರ ಸಾಮಂತ್ ಮತ್ತು ದಿನೇಶ್ ಪ್ರಭು, ಶಾಶ್ವತ ಟ್ರಸ್ಟಿ ದಿನೇಶ್ ಸಾಮಂತ್, ಇತರ ಟ್ರಸ್ಟಿ ಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.
ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ […]