ತ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ದಸರಾ ಕ್ರೀಡಾಕೂಟ-2022 ರ ತ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರ ತಂಡಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಶ್ರೀ ವೆಂಕಟರಮಣ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ : 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್‌ಗಳನ್ನು ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುವುದರಿಂದ ಆ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಜ್ಞಾನ ವಿಭಾಗದಲ್ಲಿ ಮೈತ್ರೆಯಿ 5 ನೇ ರ‍್ಯಾಂಕ್, ಮನೀಷ್ ಆರ್ ಹೆಬ್ಬಾರ್ 7 ನೇ ರ‍್ಯಾಂಕ್, ಪ್ರಾಚಿ ಎನ್. 9 ನೇ ರ‍್ಯಾಂಕ್, ಯು. ಕಾರ್ತಿಕ್ ಐತಾಳ್ 10 ನೇ ರ‍್ಯಾಂಕ್, ವಾಣಿಜ್ಯ ವಿಭಾಗದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ […]