ಟೆನ್ನಿಕೋಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಕೊಡಗು ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ. 05 ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲ ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಮಾತನಾಡಿ, ಕಡಿಮೆ ಶುಲ್ಕದಲ್ಲಿ […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 2023- 24 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ರಾಷ್ಟಮಟ್ಟದ ವಾಲಿಬಾಲ್ ಆಟಗಾರ ಹಾಗೂ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿ ಸುದೀಪ್ ಶೆಟ್ಟಿ ಇಂದು ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳನ್ನು ದೈಹಿಕವಾಗಿ- ಮಾನಸಿಕವಾಗಿ ಸದೃಢನನ್ನಾಗಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಕ್ರೀಡೆ ಅವಶ್ಯಕ ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ […]
ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಉಡುಪಿ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2023-24 ರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಶ್ರವಣ್ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ […]
ಅಂತರ್ ಕಾಲೇಜು ಭಕ್ತಿ ಗೀತೆ ಸ್ಪರ್ಧೆ: ಶ್ರೀ ವೆಂ.ಪ. ಪೂ.ಕಾಲೇಜಿನ ವಿದ್ಯಾರ್ಥಿನಿ ಧಾರಿಣಿಗೆ ಪ್ರಥಮ ಸ್ಥಾನ
ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಕುಂದಾಪುರ ತಾಲೂಕು ಮಟ್ಟದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್. ಪ್ರಥಮ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.