ವಾಲಿಬಾಲ್ ಪಂದ್ಯಾಟ: ಶ್ರೀ ವೆಂ.ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಕಲ್ಪಿತಾ ಮತ್ತು ಓಂಕಾರ್ ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಎತ್ತರ ಜಿಗಿತ: ಶ್ರೀ ವೆಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಿನನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಉಡುಪಿ ಜಿಲ್ಲಾ ಅಮೆಚೂರ್ ಅಸೋಸಿಯೇಶನ್ ಅವರು 18 ವರ್ಷದೊಳಗಿನವರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಅನುಜ್ಞಾ ಗೆ ದ್ವಿತೀಯ ಸ್ಥಾನ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಜ್ಞಾ 60 ಕೆ. ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ನೀಟ್ ಪರೀಕ್ಷೆ: ಶ್ರೀವೆಂಕಟರಮಣ ಕಾಲೇಜಿನ ರಿಷಿ ಶೆಟ್ಟಿಗೆ 517 ಅಂಕ

ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿಷಿ ಶೆಟ್ಟಿ 517 ಅಂಕಗಳನ್ನು ಪಡೆದು ಅರ್ಹತೆ ಪಡೆಯುವ ಮೂಲಕ ಸಾಧನೆಗೈದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಕುಂದಾಪುರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂನ್ 10 ರಂದು ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಶೈಕ್ಷಣಿಕ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರೂ ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು. ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ರಸಾಯನ […]