ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಜಂಟಿ ಆಶ್ರಯದಲ್ಲಿ ಜರುಗಿದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರವಣ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಟೆನ್ನಿಕ್ವಾಯಿಟ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಸೆ. 24 ರಂದು ಜರುಗಿದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಖ್ಯಾತ್ ಮತ್ತು ಮನೀಶ್ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿರಾಜ್ಯ ಮಟ್ಟದಲ್ಲಿ ಕಾಲೇಜನ್ನು ಪ್ರತಿನಿಧಿಸಲು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಇವರಿಂದ ತರಬೇತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, […]
ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಅವಿರತವಾಗಿ ನಡೆಯುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಧಾರಿಣಿ ಕೆ. ಎಸ್ […]
ಕಬಡ್ಡಿ ಪಂದ್ಯಾಟ: ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಸಂಯುಕ್ತ ಆಶ್ರಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.
ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ, ಬೆಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ರಾವ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು […]