ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಈಟಿ ಎಸೆತ: ವೆಂಕಟರಮಣ ಕಾಲೇಜಿನ ಓಂಕಾರ್ ಕಾಮತ್ ಗೆ ಕಂಚಿನ ಪದಕ
ಕುಂದಾಪುರ: ಕರ್ನಾಟಕ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2022 ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಈಟಿ ಎಸೆತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಓಂಕಾರ್ ಕಾಮತ್ ಕಂಚಿನ ಪದಕ ಪಡೆಯುವುದರ ಮೂಲಕ ಕೀರ್ತಿಶಾಲಿಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ಸಿಇಟಿ ಫಲಿತಾಂಶದಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದ ರ‍್ಯಾಂಕುಗಳೊಂದಿಗೆ ಗುರುತಿಸಿಕೊಂಡ ಕಾಲೇಜು ಇದೀಗ ಸಿಇಟಿ ಫಲಿತಾಂಶದಲ್ಲಿ ಅಪೂರ್ವ ಸಾಧನೆ ಮೆರೆದಿದೆ. 2021 – 22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ( ಕೆ-ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವರ್ಷ (ಎಂಜಿನಿಯರಿಂಗ್- 422 ), ಮನೀಶ್ ಹೆಬ್ಬಾರ್ (ಎಂಜಿನಿಯರಿಂಗ್ – 1090, ಎಗ್ರಿಕಲ್ಚರ್- 287, ವೆರ್ಟನರಿ- 1100, ಬಿಎನ್‌ವೈಎಸ್ -505 ), ಕೀರ್ತನ್ ಕಿಣಿ (ಎಂಜಿನಿಯರಿಂಗ್- 1139), ಯು. […]
ಜೆಇಇ ಮೈನ್ಸ್ ಪರೀಕ್ಷೆ: ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ 6 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಕೆ
ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ಜರುಗಿದ 2022 ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ದಾಖಲಿಸಿದ್ದಾರೆ. ಕೀರ್ತನ್‌ಕಿಣಿ 95.75 ಪರ್ಸೆಂಟೈಲ್, ಮೊಗವೀರ್ ಸಾಹಿಲ್ ಶೇಖರ್ 93.63 ಪರ್ಸೆಂಟೈಲ್, ಅಮೋಘ ಕಾರಂತ್ 92.7 ಪರ್ಸೆಂಟೈಲ್ , ನಂದನ್ ಪೈ 91.26 ಪರ್ಸೆಂಟೈಲ್,ಪ್ರಣವ್.ಎಸ್.ಜೋಗಿ 91.12 ಪರ್ಸೆಂಟೈಲ್, ಕಾರ್ತಿಕ ಐತಾಳ್ 90.94 ಪರ್ಸೆಂಟೈಲ್ ಗಳಿಸಿದ್ದಾರೆ. ಉತ್ತಮ ಫಲಿತಾಂಶ ಪಡೆದಿರುವ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಮನು ಹಂದಾಡಿಯವರಿಂದ ನಗೆ ಹಬ್ಬ ಕಾರ್ಯಕ್ರಮ
ಕುಂದಾಪುರ : ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸಬಹುದು ಎನ್ನುವುದನ್ನು ತೋರಿಸಿಕೊಟ್ಟ ಮನು ಹಂದಾಡಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮನು ಹಂದಾಡಿಯವರಿಂದ ವಿದ್ಯಾರ್ಥಿಗಳಿಗಾಗಿ ‘ನಗೆ ಹಬ್ಬ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪ್ರ ಕನ್ನಡದ ಕಂಪನ್ನು ಪಸರಿಸುತ್ತಾ ಸಮಾಜದಲ್ಲಿರುವ ಶಿಕ್ಷಣವಂತ, ಅಕ್ಷರವಂತ, ವಿದ್ಯಾವಂತರ ನಡುವೆ ಇರುವ ವ್ಯತ್ಯಾಸವನ್ನು ತಿಳಿಸುವುದರ ಮೂಲಕ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೌಲ್ಯಗಳನ್ನು […]