ಸಿಕೋ ಕೈ ಕರಾಟೆ ಇಂಟರ್ ನ್ಯಾಷನಲ್ 2023: ಕಂಚಿನ ಪದಕ ಪಡೆದ ವಂಶಿತಾ ದೇವಾಡಿಗ

ಕುಂದಾಪುರ : ಸಿಕೋ ಕೈ ಕರಾಟೆ ಇಂಟರ್ ನ್ಯಾಷನಲ್ ಇಂಡಿಯಾ ಮತ್ತು ಭಾರತ್ ಕರಾಟೆ ಅಕಾಡೆಮಿ ಇವರ ಸಂಯೋಜನೆಯಲ್ಲಿ ಆಗಸ್ಟ್ 11 ರಿಂದ 13 ರವರೆಗೆ ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಂಶಿತಾ ಜಿ. ದೇವಾಡಿಗ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆಯುವುದರ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ […]

ಐಐಟಿ ಖರಗ್ ಪುರ್ ಗೆ ಆಯ್ಕೆಯಾದ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ ವರ್ಗವಾರು(category wise) 2126 ನೇ ರ‍್ಯಾಂಕ್ ಪಡೆದಿರುವುದರಿಂದ ಕೇಂದ್ರ ಸರಕಾರದ ಶಿಕ್ಷಣ ವಿಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ ಐ ಟಿ ) ಖರಗ್ ಪುರ ಪಶ್ಚಿಮ ಬಂಗಾಳದ ವಿದ್ಯಾಸಂಸ್ಥೆಗೆ 2023 – 2024 ನೇ ಸಾಲಿನ ಬಾಹ್ಯಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಎಂಜಿನಿಯರಿಂಗ್ ಪದವಿ ಶಿಕ್ಷಣ ಪಡೆಯಲು […]

ರಾಷ್ಟ್ರಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾಧನೆ

ಕುಂದಾಪುರ : ಜುಲೈ 15 ಮತ್ತು 16 ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಹೈಫೈವ್ – 2023 ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಣಯ್ ಕುಮಿಟೆ ಯಲ್ಲಿ ತೃತೀಯ ಮತ್ತು ಕಟಾ ದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎ ಫೌಂಡೇಶನ್ ಪರೀಕ್ಷೆ ಫಲಿತಾಂಶ: ಶ್ರೀ ವೆಂಕಟರಮಣ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: 2022ರ ಡಿಸೆಂಬರ್‌ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ನುರಿತ ಉಪನ್ಯಾಸಕರ ನಿರಂತರ ಬೋಧನೆಯ ಸದುಪಯೋಗವನ್ನು ಪಡೆದುಕೊಂಡು ಶ್ರೇಷ್ಠ ಸಾಧನೆ ಮೆರೆದಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ಆಯೋಜನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿನ.12ರಂದು ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಜರುಗಿದ ವ್ಯವಹಾರ ದಿನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ, ಕಲಿಕೆಯ ಹಂತದಲ್ಲಿಯೇ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದ ಯೋಜನೆಗಳನ್ನು ಸ್ವಯಂ ರೂಪಿಸಿಕೊಳ್ಳುವ ಬದ್ಧತೆಯನ್ನು ಹೊಂದಿದರೆ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು. ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ […]