ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನ.8 ರಂದು ವಿದ್ಯಾರ್ಥಿಗಳಿಗೆ “ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ” ಹಾಗೂ “ನಮಗೂ ಹಕ್ಕಿದೆ @75” ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಕೀಲ ಭವಿಷ್ ಕುಂದರ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಮಾದಕ ವಸ್ತು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಇವರು ವಹಿಸಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ […]
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಭಂಡಾರಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ್ 61 ಕೆಜಿ ವಿಭಾಗದಲ್ಲಿ ಸ್ವರ್ಣ ಪದಕ, ಆತ್ಮಕ್ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿ ಪದಕ, ಆಶ್ರಯ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಕಂಚಿನ ಪದಕ, ಸಮರ್ಥ 74 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಿರುತ್ತಾರೆ. ಈ ಮೂಲಕ ಜಿಲ್ಲಾ […]
ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆ ಹಾಗೂ ಯಾವ ರೀತಿಯ ಜೀವನ ಶೈಲಿ ರೂಢಿಸಿಕೊಳ್ಳುವುದರ ಮೂಲಕ ಇವುಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವುದನ್ನು ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವೈದ್ಯೆ ಡಾ. ವಾಣಿಶ್ರೀ ಐತಾಳ ಮನಮುಟ್ಟುವಂತೆ ವಿವರಿಸಿದರು. ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭೌತ ಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ […]
ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಚೆಸ್ ಮತ್ತು ಈಟಿ ಎಸೆತ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಉಡುಪಿ ಜಿಲ್ಲೆ ಮತ್ತು ಶ್ರೀ ಮೂಕಾಂಬಿಕ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನಿರುದ್ಧ್ ಶೇಟ್ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೆಶನ್ ಆಯೋಜಿಸಿದ ಜೂನಿಯರ್ ವಿಭಾಗದ ಈಟಿ ಎಸೆತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ […]