ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸೆ.11 ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ ಕೋರ್ಸ್ ನ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ಸಿಎ ವಸಂತ ಶಾನುಭಾಗ್, ಸಿ ಎ ಪರೀಕ್ಷೆ ತೆಗೆದುಕೊಳ್ಳಲು ಬೇಕಾದ ಶೈಕ್ಷಣಿಕ ಅರ್ಹತೆ ಮತ್ತು ಉತ್ತೀರ್ಣರಾಗಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಿಎ ಕೋರ್ಸ್ ನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ರಾಗಿಣಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿ, ವಿನಯ್ ಶಾನುಭಾಗ್ ವಂದಿಸಿ, […]
ಶ್ರೀವೆಂ.ಪ.ಪೂ ಕಾಲೇಜಿನ ಅನುಷಾ ಪ್ರಭು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ
ಕುಂದಾಪುರ: 2023 ರ ಜೂನ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಿಗಾಗಿ ಕಾರ್ಯಾಗಾರ
ಕುಂದಾಪುರ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 28 ರಂದು ಭೌತಶಾಸ್ತ್ರದ ಉಪನ್ಯಾಸಕರಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಉಪನ್ಯಾಸಕರು ಅತ್ಯುತ್ತಮ ಬೋಧನಾ ಶೈಲಿಯನ್ನು ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು. ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮತ್ತು ಉಡುಪಿ […]
ನೀಟ್ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನಿತೇಶ್ ಗೆ 564 ಅಂಕ
ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿತೇಶ್ 564 ಅಂಕಗಳನ್ನು ಪಡೆದು ಅರ್ಹತೆ ಪಡೆದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.
ಸತತ 5 ನೇ ಬಾರಿ ಶೇ 100 ಫಲಿತಾಂಶ: ಮರುಮೌಲ್ಯಮಾಪನದಲ್ಲಿ ಶ್ರೀವೆಂಕಟರಮಣ ಕಾಲೇಜಿಗೆ ಒಟ್ಟು 13 ರ‍್ಯಾಂಕ್
ಕುಂದಾಪುರ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಫತಾಂಶ ಬಂದಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಸತತ 5 ನೇ ಬಾರಿ ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಮರುಮೌಲ್ಯಮಾಪನದಲ್ಲಿ ವಿಜ್ಞಾನ ವಿಭಾಗದ ಪ್ರಣಮ್ಯ 590 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್, ಇಂಚರ 589 ಅಂಕ ಪಡೆಯುವ ಮೂಲಕ 8ನೇ ರ‍್ಯಾಂಕ್, ಸಂಜನಾ ಶೆಟ್ಟಿ 587 ಅಂಕಗಳನ್ನು ಪಡೆದು 10 ನೇ ರ‍್ಯಾಂಕ್ ಪಡೆದಿರುತ್ತಾಳೆ. ರಾಜ್ಯಮಟ್ಟದಲ್ಲಿ ಒಟ್ಟು 13 ರ‍್ಯಾಂಕುಗಳನ್ನು […]