ದ್ವಿತೀಯ ಪಿಯುಸಿ ಫಲಿತಾಂಶ: ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರಾಜ್ಯ ಮಟ್ಟದ ರ‍್ಯಾಂಕ್

ಕುಂದಾಪುರ: ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ರ‍್ಯಾಂಕ್‌ಗಳನ್ನು ಪಡೆಯುವುದರೊಂದಿಗೆ ಅಭೂತ ಪೂರ್ವ ಸಾಧನೆ ಮೆರೆದ ಕುಂದಾಪುರದ ಏಕೈಕ ಕಾಲೇಜ್ ಆಗಿ ಹೊರಹೊಮ್ಮಿದೆ. ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ನೇಹಾ ಜೆ. ರಾವ್ 594 ಅಂಕಗಳೊಂದಿಗೆ ತೃತೀಯ ರ‍್ಯಾಂಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್, ಸೃಜನ್ ಭಟ್. ಕೆ 591 ಅಂಕಗಳೊಂದಿಗೆ 6ನೇ ರ‍್ಯಾಂಕ್, ಪ್ರಜ್ಞಾ , ನಿತೇಶ್, ಪ್ರಣಮ್ಯ ಜಿ.ಎಚ್ 589 ಅಂಕಗಳೊಂದಿಗೆ 8ನೇ […]

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿಗೆ ಪ್ರಥಮ ಸ್ಥಾನ

ಕುಂದಾಪುರ: ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೇರಿ ವತಿಯಿಂದ ಡಿ. 15 ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಕೆ. ಇ. ಎಲ್. ಎಸ್ ಪದವಿ ಪೂರ್ವ ಕಾಲೇಜು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.14 ರಂದು ಜರುಗಿದ ರಾಜ್ಯ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ02 ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಭಾಗವಹಿಸಿ ಮಾತನಾಡಿ, ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಆತ್ಮ ವಿಶ್ವಾಸ ರೂಪಿಸಿಕೊಳ್ಳುವ ಬಗ್ಗೆ ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ ತೆರೆ ಎಳೆದು ಜೀವನದಲ್ಲಿ ಯಶಸ್ವಿಯಾಗಲು […]

ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾಸನ ಮತ್ತು ಹೆಚ್. ಕೆ. ಎಸ್. ಪದವಿ ಪೂರ್ವ ಕಾಲೇಜು ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ01 ರಂದು ಜರುಗಿದ ಮೈಸೂರು ವಿಭಾಗ ಮಟ್ಟದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ […]