ಉರಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ : ಜಮ್ಮು ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ ಎಂದು ಭಾರತೀಯ ಸೇನೆ ಭಾನುವಾರ ತಿಳಿಸಿದೆ.ಪಿಸ್ತೂಲ್​, ಗ್ರೆನೇಡ್​ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಒಳನುಸುಳುವಿಕೆ ಮುಂದುವರಿದಿದೆ. ಆದರೆ, ಭಾರತೀಯ ಸೇನೆ ಯಶಸ್ವಿಯಾಗಿ ತಡೆಯುತ್ತಿದೆ. ಈ ಬಗ್ಗೆ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸೇನೆ, ‘ಉರಿ ಸೆಕ್ಟರ್​ನ ಬಾರಾಮುಲ್ಲಾದ ಗಡಿಯಲ್ಲಿ ಪಾಕಿಸ್ತಾನ ಕಡೆಯಿಂದ ಭಯೋತ್ಪಾದಕರು ಒಳನುಸುಳುವ ಸಂಚು ರೂಪಿಸಿದ್ದರು. ಗುಪ್ತಚರ ದಳ​ […]