ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯಸುಬ್ರಹ್ಮಣ್ಯ ವಿ.ಎಸ್. ಗೆ ನಾಲ್ಕನೇ ರ‍್ಯಾಂಕ್

ಶಿರ್ವ: ಮಂಗಳೂರು ವಿಶ್ವವಿದ್ಯಾನಿಲಯ 2020ರ ಸಪ್ಟೆಂಬರ್ ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಶಿರ್ವ ಸಂತ ಮೇರಿ ಕಾಲೇಜಿನ ಬಿಸಿಎ (ಗಣಕ ವಿಜ್ಞಾನ ವಿಭಾಗ) ವಿದ್ಯಾರ್ಥಿ ಸತ್ಯಸುಬ್ರಹ್ಮಣ್ಯ ವಿ.ಎಸ್. ಅವರು ಶೇ. 95.72 ಅಂಕಗಳೊಂದಿಗೆ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಇವರು ಕಾಸರಗೋಡಿನ ವೆಂಕಟೇಶ್ವರ ಭಟ್ ಮತ್ತು ಶ್ರೀಗೌರಿ ದಂಪತಿಯ ಪುತ್ರ. ಕಾಲೇಜಿನ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ಆಡಳಿತಾತ್ಮಕ ಸಿಬ್ಬಂದಿ, ರಕ್ಷಕ ಶಿಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.