ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಅವಿರತವಾಗಿ ನಡೆಯುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಧಾರಿಣಿ ಕೆ. ಎಸ್ […]

ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾಟ: ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಭುವನೇಂದ್ರ ಪಿಯು ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ. ಬಾಲಕರ ತಂಡದ ನಿಶಾಂತ್‌ ನರಸಿಂಹ ಹೆಗ್ಡೆ ಹಾಗೂ ಬಾಲಕಿಯರ ತಂಡದ ಸಾರ ಕ್ಷೇವಿಯರ್‌ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ […]

ಬೌದ್ಧಿಕ ಹಾಗೂ ಮಾನಸಿಕ ವಿಕಾಸಕ್ಕೆ ಹೆಚ್ಚು ಒತ್ತು ಕೊಡುವ ಆಟಗಳನ್ನು ಆಡಬೇಕು: ಯಶ್ ಪಾಲ್ ಸುವರ್ಣ

ಉಡುಪಿ: ನಾವು ಕೇವಲ ಮನೋರಂಜನೆಗಾಗಿ ಇರುವ ಕ್ರೀಡೆಗಳತ್ತ ಆಕರ್ಷಿತರಾಗಬಾರದು. ಬೌದ್ಧಿಕ, ಮಾನಸಿಕ ವಿಕಾಸಕ್ಕೆ ಅನುಕೂಲವಾಗುವ ಮತ್ತು ದೇಹಕ್ಕೆ ಹೆಚ್ಚು ವ್ಯಾಯಾಮವನ್ನು ಕೊಡುವ ಆಟ ಶಟ್ಲ್ ಬ್ಯಾಡ್ಮಿಂಟನ್. ಮಕ್ಕಳು ಈ ಶಟ್ಲ್ ಬ್ಯಾಡ್ಮಿಂಟನ್ ಆಟದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಉಡುಪಿ ಇವರ ಸಹಯೋಗದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ […]