ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಶ್ಯಾಮ್‌ಪ್ರಸಾದ್ ಅವರಿಗೆ ಡಾಕ್ಟರೇಟ್

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದಲ್ಲಿ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಶ್ಯಾಮ್‌ಪ್ರಸಾದ್ ಕೆ ಅವರು ‘ಸಿಂತಸಿಸ್ ಆಫ್ ಥರ್ಮೋಇಲೆಕ್ಟ್ರಿಕ್ ಮೆಟೀರಿಯಲ್ಸ್ ಫಾರ್ ಲೊ ಆಂಡ್ ಹೈ ಟೆಂಪರೇಚರ್ ಎಪ್ಲಿಕೇಶನ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಎಕಾಡೆಮಿ ಆಫ್ ಹಯರ್ ಎಜುಕೇಶನ್ ಜೂ.6 ರಂದು ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಮಣಿಪಾಲ ತಾಂತ್ರಿಕ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಅಶೋಕ್ ರಾವ್ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.