ಸಿದ್ಧಕಟ್ಟೆ: ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಸಿದ್ಧಕಟ್ಟೆ ವಲಯ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.5 ಮತ್ತು ಅ.6ರಂದು ಸಿದ್ಧಕಟ್ಟೆಯ ಕೇಂದ್ರ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಗುವುದು ಎಂದು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಅವರು ಗುರುವಾರ ಸಿದ್ಧಕಟ್ಟೆಯ ಹರ್ಷಲಿ ಸಭಾಭವನದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಸಮಿತಿ ಅಧ್ಯಕ್ಷ ಲೋಕೇಶ್ ಶೆಟ್ಟಿ ಮೊಯಿಲೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. […]