ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಕಟ್ಟಡ ‘ಕದಿರು’ ಉದ್ಘಾಟನೆ

ಸಿದ್ದಾಪುರ: ಶತಮಾನೋತ್ಸವ ಸಂಭ್ರಮಾಚರಣೆಯ ಸಮೀಪದಲ್ಲಿರುವ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಸ್ವಂತ ಬಂಡವಾಳದಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ‘ಕದಿರು’ ಜೂ. 26ರಂದು ಉದ್ಘಾಟನೆ ಗೊಂಡಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ನೂತನ ಕಟ್ಟಡ ಹಾಗೂ ಆಡಳಿತ ಮಂಡಳಿಯ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು. ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕಿಂಗ್‌ ವಿಭಾಗ ಮತ್ತು ಸಭಾ ಭವನ […]

ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ  ಸಂಘ ಜೂ.26: ನೂತನ ಕಟ್ಟಡ  ‘ಕದಿರು’ ಉದ್ಘಾಟನೆ

ಸಿದ್ದಾಪುರ: ಶತಮಾನೋತ್ಸವ ಸಂಭ್ರಮಾಚರಣೆಯ ಸಮೀಪದಲ್ಲಿರುವ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘವು ಸ್ವಂತ ಬಂಡವಾಳದಿಂದ ಸುಮಾರು 2 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಕದಿರು ಜೂ.26ರ ಬುಧವಾರ ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಎ. ಜಯರಾಮ  ಭಂಡಾರಿ ಅವರು ಹೇಳಿದರು. ಅವರು ಸಿದ್ದಾಪುರದಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ ನೂತನ ಕಟ್ಟಡ ಉದ್ಘಾಟನ ಕಾರ್ಯಕ್ರಮದ ಅಂಗವಾಗಿ ಜೂ.23ರಂದು ನಡೆಸಿದಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದರು. 26ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.  […]