ಉಡುಪಿ ಶ್ರೀಕೃಷ್ಣ ಮಠವನ್ನು ಸ್ವಾಧೀನಕ್ಕೆ ಪಡೆಯಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್
ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿತ್ತು ಎನ್ನುವ ಮೂಲಕ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ. ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಠವನ್ನು ಸರ್ಕಾರದ ವಶಕ್ಕೆ ಪಡೆಯುವ ವಿಷಯ ಗೊತ್ತಾದಾಗ ಸ್ವತಃ ನಾನೇ ಸಿದ್ಧರಾಮಯ್ಯ ಬಳಿಗೆ ಹೋಗಿ, ಮಠವನ್ನು ವಶಪಡಿಸಿಕೊಂಡರೆ ಮೊದಲಿಗೆ […]