ದೇಶದ್ರೋಹದ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಸಮರ್ಥಿಸುವ ಮೂಲಕ ಸಿದ್ದರಾಮಯ್ಯ ಯೋಧರಿಗೆ ಅವಮಾನ ಮಾಡಿದ್ದಾರೆ: ಶಾಸಕ ಸುನಿಲ್ ಕುಮಾರ್

ಮಣಿಪಾಲ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕೇಳಿಬಂದಿರುವ ದೇಶದ್ರೋಹದ ಆರೋಪ ಹಾಗೂ ಆ ನಂತರ ನಡೆದ ಪೊಲೀಸ್ ವಿಚಾರಣೆ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಏನಿದು ಪ್ರಕರಣ.? ಕಾರ್ಕಳದ ರಾಧಾಕೃಷ್ಣ ಹಿರ್ಗಾನ ಎಂಬಾತ ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಸೈನಿಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಈ ಸಂಬಂಧ ಪೊಲೀಸರು ವಿಚಾರಣೆಗೆ ಕರೆದರೂ ರಾಧಾಕೃಷ್ಣ ವಿಚಾರಣೆ […]